ಬೆಂಗಳೂರು: ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ವಿ.ಪೊನ್ನುರಾಜ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿದ್ದ ಡಾ.ಎಸ್.ಸೆಲ್ವಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಅವರಿಂದ ತೆರವಾದ ಸಿಎಂ ಕಾರ್ಯದರ್ಶಿ ಹುದ್ದೆಗೆ ಪೊನ್ನುರಾಜ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ.ಪೊನ್ನುರಾಜ್ ಇನ್ನು ಮುಂದೆ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಸೆಲ್ವಕುಮಾರ್ ಅವರನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ದಿಢೀರ್ ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ: ಸಚಿವ ಆಕಾಂಕ್ಷಿಗಳ ಪಟ್ಟಿ ಬಹುತೇಕ ಸಿದ್ಧ
![](https://vijayapatha.in/wp-content/uploads/2024/02/QR-Code-VP-1-1-300x62.png)