NEWSಕೃಷಿದೇಶ-ವಿದೇಶನಮ್ಮರಾಜ್ಯ

ಸಮಿತಿಯ ನಿರ್ದೇಶನದಂತೆ ಎಂದ್ಹೇಳಿ ನಾಡಿನ ರೈತರ ಬಲಿಕೊಟ್ಟ ಸರ್ಕಾರ: ಮುಖ್ಯಮಂತ್ರಿ ಚಂದ್ರು ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ದೇಶನದಂತೆ ನೀರು ಬಿಟ್ಟಿದ್ದೇವೆ ಎಂದು ಬೇಜವಾಬ್ದಾರಿಯಿಂದ ಹೇಳುತ್ತಿರುವ ಕರ್ನಾಟಕ ರಾಜ್ಯ ಸರ್ಕಾರವು, ಅಧಿಕಾರವನ್ನು ಉಳಿಸಿಕೊಳ್ಳಲು, ರಾಜಕೀಯ ಲಾಭ ಪಡೆಯಲು ರೈತರ ಮತ್ತು ಕನ್ನಡಿಗರ ಹಿತವನ್ನೇ ಬಲಿಕೊಟ್ಟಿದೆ ಎಂದು ರಾಜ್ಯ ಆಮ್‌ ಆದ್ಮಿ ಪಕ್ಷದ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಗುಡುಗಿದ್ದಾರೆ.

ಶಾಸಕರ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ರೈತಪರ ಸಂಘಟನೆಗಳು, ಕನ್ನಡ ಪರ ಹೋರಾಟ ಸಂಘಗಳು, ನಾಡಿನ ನೀರಾವರಿ ತಜ್ಞರು, ಸಾಹಿತಿಗಳು ಹಾಗೂ ಚಿಂತಕರನ್ನೊಳಗೊಂಡ ‘ನಮ್ಮ ಜಲ ನಮ್ಮದು – ಬನ್ನಿ ಮಾತಾಡೋಣ’ ವಿಶೇಷ ದುಂಡುಮೇಜಿನ ಸಭೆಯಲ್ಲಿ ಚಂದ್ರು ಮಾತನಾಡಿದರು.

ರಾಜ್ಯದಲ್ಲಿ ಈ ವರ್ಷ ನಿರೀಕ್ಷೆಯ ಮಳೆಯಾಗದೆ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಏಕಾಏಕಿ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಲಾಗಿದ್ದು. ನಾಡಿನಲ್ಲಿ ಕುಡಿಯುವ ನೀರಿಗೂ ಸಂಕಷ್ಟವಿದೆ ಎಂಬ ಗಂಭೀರ ಸಂಗತಿಯನ್ನು ಕರ್ನಾಟಕ ರಾಜ್ಯ ಸರ್ಕಾರದ ಗಮನಕ್ಕೆ ತರುವ ಉದ್ದೇಶ ಈ ಸಭೆಯದು ಎಂದರು.

“ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ತಕ್ಷಣ, ತಮಿಳುನಾಡಿಗೆ ನೀರು ಹರಿಸುವ ನಿರ್ಧಾರ ಕೈಗೊಂಡ ಕರ್ನಾಟಕ ಸರ್ಕಾರದ ಧೋರಣೆ ಒಪ್ಪುವಂಥದ್ದಲ್ಲ. ಸರ್ಕಾರ ಪ್ರತಿಯಾಗಿ ಕೂಡಲೇ ಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು, ರಾಜಕೀಯ ಲಾಭಕ್ಕಾಗಿ ಕನ್ನಡಿಗರ ಹಿತ ಬಲಿಕೊಟ್ಟಿರುವುದು ಸರಿಯಲ್ಲ ಎಂದು ಹೇಳಿದರು.

ಇನ್ನು ‘ಕಾವೇರಿ ನೀರು ನಿಯಂತ್ರಣ ಸಮಿತಿ’ಯ ನಿರ್ದೇಶನದಂತೆ ನೀರು ಬಿಟ್ಟಿದ್ದೇವೆ ಎಂದು ಹೇಳುತ್ತಿದ್ದ ಸರ್ಕಾರವು, ಪ್ರತಿಭಟನೆ ಹೆಚ್ಚಾದಂತೆ ಸರ್ವಪಕ್ಷ ಸಭೆ ಕರೆದಿರುವುದು ‘ಊರು ಕೊಳ್ಳೆಯಾದಮೇಲೆ ದಿಡ್ಡಿ ಬಾಗಿಲು ಹಾಕಿದಂತೆ’ ಈ ಸಭೆ. ಈ ಸಭೆಗೆ ಕಾವೇರಿ ನೀರು ಉಳಿಸಲು ಸತತ ಹೋರಾಟ ನಡೆಸಿರುವ ರೈತ ಮತ್ತು ಕನ್ನಡ ಸಂಘಟನೆಗಳನ್ನು ಹೊರಗಿಟ್ಟು, ಎರಡು ರಾಜಕೀಯ ಪಕ್ಷಗಳನ್ನು ಮಾತ್ರ ಕರೆದದ್ದು ಈ ಸರ್ಕಾರದ ಪ್ರಾಮಾಣಿಕತೆಯನ್ನು ಪ್ರಶ್ನೆಸುವಂತಾಗಿದೆ ಎಂದರು.

ಕರ್ನಾಟಕಕ್ಕೆ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಈ ಮೂರು ಪಕ್ಷಗಳು ತಮ್ಮ ಸ್ವಾರ್ಥ ಸಾಧನೆಗೆ ಕನ್ನಡಿಗರ ಹಿತವನ್ನು ಬಲಿಕೊಟ್ಟಿರುವುದು, ಕಾಣದಂತೆ ನೀರು ಹರಿಸಿರುವುದಕ್ಕೆ ಸಾಕಷ್ಟು ನಿದರ್ಶನಗಳಿವೆ ಎಂದು ಮುಖ್ಯಮಂತ್ರಿ ಚಂದ್ರು ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರ ರೈತರ ಮೇಲೆ ಚಪ್ಪಡಿ ಎಳೆಯುತ್ತಿದೆ: ಕುರುಬೂರು ಶಾಂತಕುಮಾರ್

ಕನ್ನಡಿಗರಿಗೆ ನೀರು ದಕ್ಕಬಾರದು: ತಮಿಳುನಾಡು ಧೋರಣೆ!: “ತಮಿಳುನಾಡು ‘ನೀರಿರಲಿ ಇಲ್ಲದಿರಲಿ, ಕರ್ನಾಟಕದ ಜನರು ಕುಡಿಯುವ ನೀರಿಲ್ಲದೆ ಒದ್ದಾಡಿದರೂ ಪರವಾಗಿಲ್ಲ, ನಮಗೆ ಬರಬೇಕಾದ ಪಾಲು ಬಂದುಬಿಡಲಿ’ ಎಂಬ ಧೋರಣೆ ದೇಶದ ಹಿತದೃಷ್ಟಿಯಿಂದ ಅಪಾಯಕಾರಿಯಾದುದ್ದಾಗಿದೆ. ಸಹಜವಾಗಿ ಮಳೆಯಾದ ವರ್ಷದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರಿನ ಹಂಚಿಕೆ ಸರಾಗವಾಗಿ ನಡೆದುಕೊಂಡು ಬರುತ್ತಿದೆ. ಆದರೆ ಮಳೆ ಕಡಿಮೆಯಾದ ವರ್ಷದಲ್ಲಿ ಎರಡೂ ರಾಜ್ಯಗಳು ಸಂಕಷ್ಟವನ್ನೂ ಪರಸ್ಪರ ಹಂಚಿಕೊಳ್ಳಬೇಕು. ಆಗ ನೀರು ಹಂಚಿಕೆಯಲ್ಲಿ ಯಾವ ಸಮಸ್ಯೆಯೂ ಉದ್ಭವಿಸುವುದಿಲ್ಲ ಎಂದರು.

ಇನ್ನು ಹಿಂದಿನ ವರ್ಷ ತಮಿಳುನಾಡಿಗೆ 500 ಟಿಎಂಸಿ ನೀರನ್ನು ಹೆಚ್ಚಾಗಿ ಬಿಡಲಾಗಿದೆ. ಅದನ್ನು ಪೂರ್ಣ ಉಳಿಸಿಕೊಳ್ಳಲು ವ್ಯವಸ್ಥೆ ಇಲ್ಲದೆ ಸಮುದ್ರಕ್ಕೆ ಹರಿದು ಹೋಗಿದೆ. ಕರ್ನಾಟಕಕ್ಕೆ ಮೇಕೆದಾಟು ಯೋಜನೆಗೆ ತಕರಾರು ತೆಗೆದಿದೆ. ಸಮುದ್ರಕ್ಕೆ ನೀರು ಹರಿದು ವ್ಯರ್ಥವಾದರೂ ಪರವಾಗಿಲ್ಲ ಕನ್ನಡಿಗರಿಗೆ ನೀರು ದಕ್ಕಬಾರದು ಎಂಬ ತಮಿಳುನಾಡು ಧೋರಣೆ ಮಾನವ ವಿರೋಧಿಯಾದದ್ದು ಎಂದು ಮುಖ್ಯಮಂತ್ರಿ ಚಂದು ಖಂಡಿಸಿದರು.

ಈ ವರ್ಷ ಕೊಡಗು ಸೇರಿದಂತೆ ಕಾವೇರಿ ಜಲಾಶಯದ ಪ್ರದೇಶಗಳಲ್ಲಿ ಕಡಿಮೆ ಮಳೆಯಿಂದಾಗಿ ಒಳಹರಿವು ಕಡಿಮೆಯಾಗಿದೆ. ಜೂನ್‌ನಿಂದ ಆಗಸ್ಟ್‌ ವರೆಗೆ ಕರ್ನಾಟಕದ ಕಾವೇರಿ ಕಣಿವೆಯಲ್ಲಿ ಶೇ.44 ರಷ್ಟು ಮಳೆಯ ಕೊರತೆಯಾಗಿದೆ. ರಾಜ್ಯದಲ್ಲಿ ಮುಂಗಾರು ಅವಧಿ ಮುಗಿಯುತ್ತಿದೆ. ಆದರೆ ತಮಿಳುನಾಡಿನಲ್ಲಿ ಮುಂಗಾರು ಅವಧಿ ಇನ್ನೂ ಇದೆ. ನಮ್ಮಲ್ಲಿ ಮಳೆ ಕೊರತೆಯೂ ಆಗಿದೆ. ಆದರೂ 10 ಸಾವಿರ ಕ್ಯೂಸೆಕ್ಸ್‌ ನೀರು ಬಿಟ್ಟಿದ್ದು ತಪ್ಪೆಂದು ಸುಪ್ರೀಂ ಕೋರ್ಟ್‌ನಲ್ಲಿ ಮನವರಿಕೆ ಮಾಡಿಕೊಡಬೇಕಿತ್ತು. ಕರ್ನಾಟಕ ಜಲಾಶಯದಲ್ಲಿರುವ ಕುಡಿಯುವ ನೀರಿಗೂ ಸಾಕಾಗುವುದಿಲ್ಲ ಎಂಬುದನ್ನು ಕರ್ನಾಟಕ ಸ್ಪಷ್ಟವಾಗಿ ದಾಖಲೆ ಸಮೇತ ನ್ಯಾಯಾಲಯಕ್ಕೆ ಮನವಿ ಮಾಡಬೇಕಿದೆ ಎಂದರು.

ತಜ್ಞರ ತಂಡ ರಚಿಸುವಂತೆ ಕೇಂದ್ರವನ್ನು ಕೋರಬೇಕು: ನೀರಿನ ಕೊರತೆಯಿದ್ದಾಗ ಹಂಚಿಕೆಯ ಬಗ್ಗೆ ಕೇಂದ್ರ ಸರ್ಕಾರ ಸಂಕಷ್ಟ ಸೂತ್ರ ರೂಪಿಸಿರುವುದೇ ಕರ್ನಾಟಕದ ಸಂಕಷ್ಟಕ್ಕೆ ಕಾರಣವಾಗಿದೆ. ತಮಿಳುನಾಡಿನವರು ನದಿ ಪಾತ್ರದ ತಳ ಭಾಗದಲ್ಲಿ ಯೋಜನೆ ಮಾಡುತ್ತಿದ್ದಾರೆ. ಅದಕ್ಕೆ ನೀರಿನ ಹಂಚಿಕೆ ಇಲ್ಲ. ಈ ಬಗ್ಗೆ ತಾಂತ್ರಿಕ ಮಾಹಿತಿ ಕಲೆಹಾಕುವ ಕೆಲಸ ಆಗಬೇಕು.

ಹೊಗೇನಕಲ್ ಎರಡನೇ ಹಂತದ ಯೋಜನೆ ಕೈಗೆತ್ತಿಕೊಳ್ಳುವ ಮಾತನ್ನು ತಮಿಳುನಾಡು ಸರ್ಕಾರ ಹೇಳುತ್ತಿದೆ. ಇದು ನಮ್ಮ ನೀರಿನ ಹಕ್ಕಿನ ಮೇಲೆ ಹೊಡೆತ. ಇಂತಹ ವಿಚಾರಗಳನ್ನು ಅಧ್ಯಯನ ಮಾಡಲು ವಿವಾದಕ್ಕೆ ಸಂಬಂಧವಿಲ್ಲದ ರಾಜ್ಯದ ತಜ್ಞರ ತಂಡವನ್ನು ರಚಿಸುವಂತೆ ಕೇಂದ್ರ ಸರ್ಕಾರವನ್ನು ಕೋರಬೇಕಿದೆ ಎಂದು ಸಭೆಯಲ್ಲಿ ಮಹತ್ವದ ವಿಚಾರವನ್ನು ಮುಖ್ಯಮಂತ್ರಿ ಚಂದ್ರು ಪ್ರಸ್ತಾಪ ಮಾಡಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು