NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್‌ 1ರಿಂದಲೇ ಜಾರಿಗೆ ಬರುವಂತೆ ಡಿ.21ರಂದು ಆದೇಶ ಹೊರಡಿಸಿದೆ.

ಚಾಲಕರು ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇತರ ಅಧಿಕಾರಿಗಳಿಗೂ ವೇತನ ನಿಗದಿ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಡಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಹೀಗಾಗಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳ, ಮುಖ್ಯಮಂತ್ರಿಯವರ ಸಲಹೆಗಾರರ/ ಸಂಪುಟ ದರ್ಜೆ ಸ್ನಾನಮಾನ ಹಾಗೂ ಸಚಿವರ ಸ್ನಾನಮಾನ ಪಡೆದ ಪ್ರಾಧಿಕಾರಿಗಳ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರ ಅಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ವೇತನ ಪರಿಷ್ಕರಿಸಿದೆ.

ಈ ಸರ್ಕಾರಿ ಆದೇಶದನ್ವಯ ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನ) ನಿಯಮಗಳು, 2018ರನ್ವಯ ಸಂಚಿತ ವೇತನವನ್ನು ನಿಗದಿಪಡಿಸಲಾಗಿದ್ದು, ಪ್ರಸ್ತುತ ರಾಜ್ಯ ಸರ್ಕಾರವು ಏಳನೇ ವೇತನ ಆಯೋಗದ ಶಿಫಾರಸಿನ ಮೇರೆಗೆ ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನ) ನಿಯಮಗಳು, 2024ನ್ನು ಜಾರಿಗೆ ತರಲಾಗಿದೆ.

ಈ ಹಿನ್ನೆಲೆಯಲ್ಲಿ ಈ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನ) ನಿಯಮಗಳು, 2024ರ ಅನುಸಾರ ಸಂವಾದಿ ಪರಿಷ್ಕೃತ ವೇತನ ಶ್ರೇಣಿಯ ಕನಿಷ್ಠ ವೇತನ ಹಂತವನ್ನು 01.11.2024ರಿಂದ ಜಾರಿಗೆ ಬರುವಂತೆ ಸಂಚಿತ ವೇತನವನ್ನಾಗಿ ಪರಿಷ್ಕರಿಸಿ ನಿಗದಿಪಡಿಸಲು ಸರ್ಕಾರವು ತೀರ್ಮಾನಿಸಿ ಈ ಆದೇಶ ಹೊರಡಿಸಿದೆ.

ಸರ್ಕಾರ ಈ ಸಂಬಂಧ ಡಿ.20ರಂದು ಆದೇಶ ಹೊರಡಿಸಿದ್ದು, ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸಂಚಿತ ವೇತನವನ್ನು 01.11.2024ರಿಂದ ಭವಿಷ್ಯಾನ್ವಯವಾಗಿ ಜಾರಿಗೆ ಬರುವಂತೆ ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನ) ನಿಯಮಗಳು, 2024ರ ಪರಿಷ್ಕೃತ ವೇತನ ಶ್ರೇಣಿಯ ಕನಿಷ್ಠ ವೇತನ ಹಂತವನ್ನು ಈ ಕೆಳಕಂಡ ದರಗಳಲ್ಲಿ ಪರಿಷ್ಕರಿಸಿ ಆದೇಶಿಸಿದೆ.

ಯಾವ ಹುದ್ದೆಗೆ ಎಷ್ಟು ವೇತನ ನಿಗದಿಯಾಗಿದೆ?:


ಹಾಗೂ ಈ ಪರಿಷ್ಕರಣೆಯು ಹೊರಗುತ್ತಿಗೆ ಆಧಾರದ ಮೇಲೆ ನೇಮಕವಾದ ಸಿಬ್ಬಂದಿಗೆ ಅನ್ವಯಿಸುವುದಿಲ್ಲವೆಂಬ ಷರತ್ತಿಗೊಳಪಟ್ಟು ನಿಗದಿಪಡಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಡಿ.ರಾಜೇಂದ್ರ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ