ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಮತ್ತು ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಉತ್ತಮ ಆಡಳಿತ ಸಪ್ತಾಹ-2024 ಅನುಷ್ಠಾನಗೊಳಿಸಲು ಕರೆದಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಉತ್ತಮ ಆಡಳಿತ ಸಪ್ತಾಹ-2024 19.12.2024 ರಿಂದ 24.12.2024 ರವರೆಗೆ ನಡೆಯಲಿದೆ. “ಪ್ರಶಾಸನ್ ಗಾಂವ್ ಕಿ ಓರೆ (ಗ್ರಾಮದ ಕಡೆಗೆ ಆಡಳಿತ)” ಎಂಬ ಅಭಿಯಾನದ ಮೂಲಕ ಜಿಲ್ಲೆಯಾದ್ಯಂತ ಸಾರ್ವಜನಿಕ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಮತ್ತು ಸೇವಾ ವಿತರಣೆಯನ್ನು ಸುಧಾರಿಸುವುದು ಸಪ್ತಾಹದ ಮುಖ್ಯ ಉದ್ದೇಶವಾಗಿದೆ.
ಹೀಗಾಗಿ ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಕಚೇರಿಗಳಲ್ಲಿ ಇದ್ದು ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರ ಪರಿಹರಿಸುವ ಮೂಲಕ ಉತ್ತಮ ಆಡಳಿತ ಸೇವೆ ಒದಗಿಸಿ ಎಂದರು.
ಸಭೆಯಲ್ಲಿ ಜಿ.ಪಂ ಸಿ.ಇ.ಒ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.