NEWSನಮ್ಮಜಿಲ್ಲೆಬೆಂಗಳೂರು

ಸ್ವಚ್ಛತೆ ಕಾಪಾಡದ ನಿವೇಶನಗಳ ಮಾಲೀಕರಿಗೆ ನೋಟಿಸ್ ನೀಡಿ ದಂಡ ಹಾಕಿ: ತುಷಾರ್ ಗಿರಿನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡದ ನಿವೇಶನಗಳನ್ನು ಗುರುತಿಸಿ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸಬೇಕೆಂದು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ಆಯಾ ವಲಯ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳನ್ನು ಪಟ್ಟಿ ಮಾಡಬೇಕು. ನಂತರ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಿ ಸ್ವಚ್ಛತೆ ಮಾಡಿ ದಂಡ ವಿಧಿಸುವುದರ ಜತೆಗೆ ಮತ್ತೆ ಈ ರೀತಿ ಮರುಕಳಿಸದಂತೆ ಎಚ್ಚರಿಕೆ ನೀಡಬೇಕು ಎಂದು ಸೂಚಿಸಿದರು.

ನಿವೇಶನ/ ಪ್ರದೇಶಗಳು ಆಸ್ತಿ ತೆರಿಗೆ ವ್ಯಾಪ್ತಿಗೆ ಬಂದಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶಿಲಿಸಿ, ಆಸ್ತಿ ತೆರಿಗೆ ವ್ಯಾಪ್ತಿಗೆ ಬರದಿದ್ದಲ್ಲಿ ಕೂಡಲೆ ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರು.

ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ಕಾನೂನು ಕ್ರಮ: ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಆಯಾ ವಲಯ ವ್ಯಾಪ್ತಿಯಲ್ಲಿರುವ ಮುದ್ರಣಾಲಯಗಳಿಗೆ ನೋಟೀಸ್ ನೀಡಿ ಯಾವುದೇ ಅನಧಿಕೃತ ಜಾಹೀರಾತು ಹಾಗೂ ಪರಿಸರ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಉಲ್ಲಂಘಣೆ ಮಾಡುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಿಯೂ ಅನಧಿಕೃತ ಜಾಹೀರಾತುಗಳು ಅಳವಡಿಸದಂತೆ ಕಟ್ಟೆಚ್ಚರ ವಹಿಸಬೇಕೆಂದರು.

ವೈಟ್ ಟಾಪಿಂಗ್ ಕಾಮಗಾರಿ ಕೂಡಲೆ ಪ್ರಾರಂಭಿಸಿ: ನರದಲ್ಲಿ ಹೊಸದಾಗಿ ಕೈಗೆತ್ತಿಕೊಳ್ಳುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು. ಸಂಚಾರಿ ಪೊಲೀಸ್ ಅಧಿಕಾರಿಗಳ ಸಹಯೋಗದೊಂದಿಗೆ ಕಾಮಗಾರಿಗಳ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕೆಂದು ತಾಕೀತು ಮಾಡಿದರು.

ಬೀದಿ ದೀಪ (Street Lights) ಗಳ ನಿರ್ವಹಣೆ ಸರಿಯಾಗಿರಲಿ: ನಗರದಲ್ಲಿ ಬೀದಿ ದೀಪಗಳು ಸರಿಯಾಗಿ ನಿರ್ವಹಣೆ ಮಾಡಬೇಕು. ವಿದ್ಯುತ್ ವಿಭಾಗದಲ್ಲಿ ಕಾರ್ಯನಿರ್ವಹಿಸುವವರಿಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಹಾಗೂ ಸಂಜೆ 5 ರಿಂದ ರಾತ್ರಿ 8.30 ಗಂಟೆಯವರೆಗೆ ಕಾರ್ಯನಿರ್ವಹಿಸಬೇಕಿದೆ. ಈ ಸಂಬಂಧ, ನಾಗರೀಕರು ‘ಸಹಾಯ’ದಲ್ಲಿ ನೀಡುವ ದೂರುಗಳನ್ನು ಕೂಡಲೆ ಸ್ಪಂದಿಸಿ ಬಗೆಹರಿಸಬೇಕು. ಬೀದಿ ದೀಪಗಳಿಲ್ಲದಿರುವ ಕಡೆ ಕೂಡಲೆ ಬೀದಿ ದೀಪಗಳನ್ನು ಅಳವಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದದರು.

ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಿ: ಪಾಲಿಕೆ ವ್ಯಾಪ್ತಿಯಲ್ಲಿ ಸರಾಸರಿ 160 ರಿಂದ 170 ಪ್ರಕರಣಗಳು ಕಂಡುಬರುತ್ತಿದೆ. ಡೆಂಘೀ ಕುರಿತು ಪರೀಕ್ಷಾ ಪ್ರಮಾಣವನ್ನು ಹೆಚ್ಛಳ ಮಾಡಲಾಗಿದೆ. 600 ಫಾಗಿಂಗ್ ಯಂತ್ರ ಹಾಗೂ 618 ಸ್ಪ್ರೇಯರ್ ಗಳ ಮೂಲಕ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಮನೀಶ್ ಮೌದ್ಗಿಲ್, ಡಾ.ಕೆ.ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಶಿವಾನಂದ್ ಕಲ್ಕೆರೆ, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ರಮೇಶ್, ಶಿವಾನಂದ್ ಕಪಾಶಿ, ಕರೀಗೌಡ, ರಮ್ಯಾ, ವಿನೋತ್ ಪ್ರಿಯಾ, ಪ್ರೀತಿ ಗೆಹ್ಲೋಟ್, ಪ್ರಧಾನ ಅಭಿಯಂತರರು, ವಲಯ ಮುಖ್ಯ ಅಭಿಯಂತರರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು