NEWSಬೆಂಗಳೂರುರಾಜಕೀಯ

ಸ್ವಂತ ಕ್ಷೇತ್ರವನ್ನೇ ಅಭಿವೃದ್ಧಿ ಪಡಿಸಲಾಗದ ಶಾಸಕ ಹ್ಯಾರಿಸ್‌ ಬೆಂಗಳೂರು ಅಭಿವೃದ್ಧಿ ಪಡಿಸುತ್ತಾರೆಯೇ: ಎಎಪಿ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಸ್ಥಾನಕ್ಕೆ ಶಾಂತಿನಗರ ಶಾಸಕ ಎನ್‌.ಎ.ಹ್ಯಾರಿಸ್‌ ಅವರನ್ನು ನೇಮಕ ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿರುವ ಆಮ್‌ ಆದ್ಮಿ ಪಾರ್ಟಿ ವಿರೋಧ ವ್ಯಕ್ತಪಡಿಸಿದೆ.

ಬಿಡಿಎ ಅಧ್ಯಕ್ಷರಾಗಿ ಹ್ಯಾರಿಸ್‌ ನೇಮಕ ವಿಚಾರವಾಗಿ ನಗರದಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್‌ ದಾಸರಿ ಅವರು, ಹಲವು ವರ್ಷಗಳಿಂದ ಪ್ರತಿನಿಧಿಸುತ್ತ ಬಂದಿರುವ ಸ್ವಂತ ಕ್ಷೇತ್ರ ಶಾಂತಿನಗರವನ್ನೇ ಅಭಿವೃದ್ಧಿ ಪಡಿಸಲಾಗದ ಹ್ಯಾರಿಸ್‌ ಅವರ ಕೈಗೆ ಇಡೀ ಬೆಂಗಳೂರು ಅಭಿವೃದ್ಧಿ ಪಡಿಸುವ ಜವಾಬ್ದಾರಿಯನ್ನು ವಹಿಸಿರುವುದು ಪ್ರಶ್ನಾರ್ಹವಾಗಿದೆ. ಬಿಡಿಎ ಅಧ್ಯಕ್ಷರಾಗಲು ಹ್ಯಾರಿಸ್‌ ಅವರಿಗಿರುವ ಅರ್ಹತೆಯೇನು ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಜನಪ್ರತಿನಿಧಿಗಳಿಗೆ ಮಣೆ ಹಾಕುವ ಪದ್ಧತಿ ಬಿಟ್ಟು, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‍‌ ಸಿಂಗ್‌ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದಾಗ ಬೆಂಗಳೂರು ಅಭಿವೃದ್ಧಿಯತ್ತ ಸಾಗಬಹುದು ಎಂಬ ಭರವಸೆ ವ್ಯಕ್ತವಾಗಿತ್ತು.

ಆದರೆ 7 ತಿಂಗಳ ಅವಧಿಯಲ್ಲೇ ಅವರಿಂದ ಅಧಿಕಾರವನ್ನು ಕಸಿದು ಪುನಃ ರಾಜಕಾರಣಿಗಳ ಹೆಗಲಿಗೆ ಏರಿಸಲಾಗುತ್ತಿದೆ. ಇಂತಹ ಬದಲಾವಣೆಗೆ ಎದುರಾದ ಒತ್ತಡವೇನು ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿನ ಈಜಿಪುರ ಸ್ಲಂ ಪ್ರದೇಶವನ್ನು ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಮಾಲೀಕತ್ವದ ಮೆಹರಿಕ್ ಹೋಲ್ಡಿಂಗ್ಸ್ ಸಂಸ್ಥೆಯ ಜೊತೆಗೂಡಿ ಮಾಡಿಕೊಂಡ ಒಪ್ಪಂದ ಸಂಪೂರ್ಣ ಹಳ್ಳ ಹಿಡಿದಿದೆ.

ಅಭಿವೃದ್ಧಿಪಡಿಸಿ ನೂತನ ಮನೆಗಳನ್ನು ಕಟ್ಟಿಕೊಡುತ್ತೇವೆಂಬ ನೆಪವೊಡ್ಡಿ ತೆರವುಗೊಳಿಸಿ ಹತ್ತು ವರ್ಷಗಳಿಗೂ ಹೆಚ್ಚು ಕಾಲ ಆಗಿದೆ. ಇದುವರೆಗೂ ಅಲ್ಲಿನ ಸಾವಿರಾರು ಕುಟುಂಬಗಳು ಬೀದಿಬದಿಯಲ್ಲಿಯೇ ವಾಸಿಸುತ್ತಿವೆ. ಇಂತಹ ಕರಾಳ ಮುಖವನ್ನು ಹೊತ್ತಿರುವ ಶಾಸಕ ಹ್ಯಾರಿಸ್, ಬೆಂಗಳೂರಿನ ಅಭಿವೃದ್ಧಿ ಹೇಗೆ ಪಡಿಸುತ್ತಾರೆ ಎಂಬುದೇ ಯಕ್ಷಪ್ರಶ್ನೆಯಾಗಿದೆ.

ನಗರದ ಅತಿದೊಡ್ಡ ಕೊಳಚೆ ಪ್ರದೇಶವೆಂದರೆ ಅದು ಶಾಂತಿನಗರ ವಿಧಾನಸಭಾ ಕ್ಷೇತ್ರವಾಗಿದೆ. ಮಿತಿಯೇ ಇಲ್ಲದ ರಾಜಕಾಲುವೆ ಒತ್ತುವರಿ, ಲೆಕ್ಕವಿಲ್ಲದಷ್ಟು ಹೊಂಡ-ಗುಂಡಿಗಳು, ಮ್ಯಾನ್‌ಹೋಲ್‌ ಹಾಗೂ ಚರಂಡಿಗಳ ತ್ಯಾಜ್ಯ ನೀರೆಲ್ಲ ಮೇಲೆ ಬಂದು ಗಬ್ಬೆದ್ದ ರಸ್ತೆಗಳೇ ತುಂಬಿವೆ.

ದಿನಕ್ಕೊಂದು ಬಾರ್‌, ಪಬ್‌, ಹುಕ್ಕಾಬಾರ್‌ಗಳು ಹುಟ್ಟಿಕೊಳ್ಳವು ಈ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಅವ್ಯವಸ್ಥೆಗಳ ಕೂಪವಾಗಿವೆ. ಲೆಕ್ಕವಿಲ್ಲದಷ್ಟು ಅನಧಿಕೃತ ಕಟ್ಟಡಗಳು, ಪಬ್‌, ಹುಕ್ಕಾಬಾರ್‌ಗಳು ತಾಂಡವವಾಡುತ್ತಿವೆ. ಡ್ರಗ್‌ ಮಾಫಿಯಾಗೆ ಕಡಿವಾಣವೇ ಇಲ್ಲವಾಗಿದೆ. ಒಂದೇ ಒಂದು ಸ್ಲಮ್‌ ಅಭಿವೃದ್ಧಿ ಪಡಿಸಿರುವ ಉದಾಹರಣೆ ಇದ್ದರೆ ಹೇಳಿ ಎಂದು ಪ್ರಶ್ನಿಸಿದರು.

ಅನಧಿಕೃತ ಕಟ್ಟಡ, ಬಾರ್‌, ಪಬ್‌, ಹುಕ್ಕಾಬಾರ್‌ಗಳಿಗೆ ಹ್ಯಾರಿಸ್‌ ಕುಟುಂಬದವರೇ ಪಾಲುದಾರರು ಎಂಬ ಆರೋಪಗಳಿವೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ತಪ್ಪಾದ ಆಸ್ತಿ ವಿವರಗಳನ್ನು ಸಲ್ಲಿಸಿದ್ದಾರೆ ಎಂಬ ಆರೋಪವೂ ಇದೆ.

ಅವರ ಮಗ ಮೊಹಮ್ಮದ್‌ ಹ್ಯಾರಿಸ್‌ ನಲಪಾಡ್‌ ನಡೆಸಿರುವ ರೌಡಿಸಮ್‌, ಪುಂಡಾಟಗಳಿಗೆ ಲೆಕ್ಕವಿದೆಯೇ? ಸ್ವಂತ ಮಗನನ್ನು, ಸ್ವಂತ ಕ್ಷೇತ್ರವನ್ನು ಒಳ್ಳೆಯ ರೀತಿಯಲ್ಲಿ ಬೆಳೆಸಲಾಗದ ಹ್ಯಾರಿಸ್‌ ಅವರಿಂದ ಬೆಂಗಳೂರು ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೇ ಎಂದು ಮೋಹನ್‌ ದಾಸರಿ ಪ್ರಶ್ನಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು