NEWSಕೃಷಿನಮ್ಮಜಿಲ್ಲೆ

ಹೈನು ರೈತರ ಅಭ್ಯುದಯಕ್ಕೆ ಸಿಎಂ ಜತೆ ಚರ್ಚೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಹಾಲು ಉತ್ಪಾದಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ವಿಜಯಪಥ ಸಮಗ್ರ ಸುದ್ದಿ

ದೇವನಹಳ್ಳಿ: ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ರಾಜ್ಯದ ಹೈನು ರೈತರ ಹಿತ ಕಾಯಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಭರವಸೆ ನೀಡಿದರು.

ದೇವನಹಳ್ಳಿಯಲ್ಲಿ ಭಾನುವಾರ ಆಯೋಜಿಸಿದ್ದ ಬಹು ಹಾಲು ಒಕ್ಕೂಟಗಳ ವತಿಯಿಂದ ಹಾಲು ಉತ್ಪಾದಕ ಸಂಘಗಳ ಸದಸ್ಯರು ಮತ್ತು ಸಿಬ್ಬಂದಿಯ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಹಾಲು ಶೇಖರಣೆ ಮಾಡುತ್ತಿರುವುದು ಬಮೂಲ್ ಸಂಸ್ಥೆಯಾಗಿದ್ದು, ಈ ಖ್ಯಾತಿಗೆ ಪಾತ್ರರಾದ ಎಲ್ಲ ಹೈನು ರೈತರ ಶ್ರಮ ಅಭಿನಂದನೀಯ ಎಂದರು.

ಕುಸಿತ ಕಂಡ ಹಾಲು ಉತ್ಪಾದನೆ: ಈ ಹಿಂದೆ ಪ್ರತಿನಿತ್ಯ 15 ಲಕ್ಷ ಲೀಟರ್ ಇದ್ದ ಹಾಲು ಉತ್ಪಾದನೆ ಇದೀಗ 13 ಲಕ್ಷಕ್ಕೆ ಕುಸಿತ ಕಂಡಿದೆ. ದೇವನಹಳ್ಳಿ ತಾಲೂಕಿನಲ್ಲಿ ದಿನಕ್ಕೆ 1.4 ಲಕ್ಷ ಲೀಟರ್ ಗೆ ಹಾಲು ಉತ್ಪಾದನೆಯಾಗುತ್ತಿದ್ದು, 163 ಕಾರ್ಯನಿರತ ಹಾಲು ಉತ್ಪಾದಕ ಸಂಘಳಿವೆ. ಈ ಎಲ್ಲ ಸಂಘಗಳಿಂದ ಒಟ್ಟು 13,320 ರೈತರು ಹೈನುಗಾರಿಕೆ ಎಂಬ ಉಪ ಕಸುಬಿನಲ್ಲಿ ತೊಡಗಿದ್ದಾರೆ ಎಂದು ಸಚಿವರು ವಿವರಿಸಿದರು.

ಹೈನುಗಾರಿಕೆಗೆ ಪ್ರೋತ್ಸಾಹ : ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆಯಿಂದ ಈ ಭಾಗದಲ್ಲಿ ರೈತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ. ಇದಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ. ಹೈನು ರೈತರಿಗೆ ಪ್ರೋತ್ಸಾಹಧನ ನೀಡುತ್ತಿರುವುದು ಇಡೀ ದೇಶದಲ್ಲಿಯೇ ರಾಜ್ಯ ಮಾತ್ರ. ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರೋತ್ಸಾಹ ಧನ ನೀಡುವುದನ್ನು ಆರಂಭಿಸಿದರು, ನಂತರದ ಸರ್ಕಾರಗಳು ಹೆಚ್ಚಿಸಿದವು. ಈಗ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರುಪಾಯಿ ನೀಡುತ್ತಿದೆ ಎಂದರು.

ಹಾಲಿನ ಬೆಲೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ಮಾರಾಟ ಮಾಡುತ್ತಿರುವುದು ಕಡಿಮೆ ಬೆಲೆಗೆ, ಕೋವಿಡ್ ಸಂದರ್ಭದಲ್ಲಿ ಹಾಲಿನ ಬೆಲೆ ಹೆಚ್ಚಿಸಲು ಸಾಧ್ಯವಾಗಲಿಲ್ಲ. ನಾಲ್ಕು ವರ್ಷದಿಂದ ಹಾಲಿನ ಬೆಲೆ ಹೆಚ್ಚಿಸದೆ ಒಂದೇ ಸಲ 5 ರುಪಾಯಿ ಹೆಚ್ಚಿಸಿದರೆ ಹೊರೆಯಾಗಲಿದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ಕಡಿಮೆ ಬೆಲೆ ಏರಿಕೆ ಮಾಡಿದ್ದಾರೆ. ಖರೀದಿ ಬೆಲೆಯಿಂದಾಗಿ ರೈತರಿಗೆ ಅದಾಯ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಹಾಲಿನ ಉತ್ಪಾದನೆ ಕಡಿಮೆಯಾಗಿದೆ ಎಂದರು.

ಹೈನುಗಾರಿಕೆ ಸುಲಭದ ಮಾತಲ್ಲ, ಆ ಕಷ್ಟಕ್ಕೆ ಸಿಗಬೇಕಾದ ಲಾಭ ದೊರೆಯದ ಕಾರಣ ಹೈನು ರೈತರು ವೃತ್ತಿಯಿಂದ ದೂರವಾಗುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ, ಅಗತ್ಯ ಕ್ರಮ ವಹಿಸಲಾಗುತ್ತದೆ. ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ಈಗಾಗಲೇ ಮಾಡಲಾಗಿದೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ, ರೈತರ ಪರ ನಿಲುವು ತೆಗೆದುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವರು ಭರವಸೆ ನೀಡಿದರು.

ಇಸ್ರೇಲ್ ಸ್ಫೂರ್ತಿಯಾಗಲಿ: ಶಿಕ್ಷಣದಿಂದ ಎಲ್ಲವೂ ಸಾಧ್ಯ, ಹಾಗಾಗಿ ರೈತರ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು, ಕೃಷಿಯಲ್ಲಿ ಆಧುನಿಕ ಪದ್ಧತಿಗಳು ಬಂದಿವೆ, ತೋಟಗಾರಿಕಾ ಬೆಳೆಗಳಲ್ಲಿ ಆಧುನಿಕ ಪದ್ಧತಿ ಅನುಸರಿಸುವ ಶಿಕ್ಷಣ ಪಡೆಯಬೇಕು, ಇಸ್ರೇಲ್ ಚಿಕ್ಕ ದೇಶವಾಗಿದ್ದರೂ, ಕಡಿಮೆ ಪ್ರಮಾಣದ ಮಳೆಯಾಗುತ್ತಿದ್ದರೂ ಅಲ್ಲಿ ಕೃಷಿ ಮತ್ತು ತೋಟಗಾರಿಕೆ ಇಡೀ ವಿಶ್ವಕ್ಕೇ ಮಾದರಿಯಾಗಿದೆ ಎಂದು ಹೇಳಿದರು.

ಭೂಮಿಗೆ ಮತ್ತು ಕೃಷಿಗೆ ಇರುವ ಶಕ್ತಿ ಮುಂದಿನ ದಿನಗಳಲ್ಲಿ ಕಾಣುತ್ತೇವೆ, ಸ್ವಾತಂತ್ರೃದ ಆರಂಭದಲ್ಲಿ ಆಹಾರ ಪದಾರ್ಥ ಆಮದು ಮಾಡಿಕೊಳ್ಳುವ ಸ್ಥಿತಿ ಇತ್ತು. ಆದರೆ ಈಗ ಪರಿಸ್ಥಿತಿ ಭಿನ್ನವಾಗಿದೆ. ದೇಶದಲ್ಲಿಯೇ ಹೆಚ್ಚಿನ ಆಹಾರ ಧಾನ್ಯ ಉತ್ಪಾದಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತು ರಾಜ್ಯ ಸರ್ಕಾರ ಸೇರಿ ರೈತರಿಗೆ ಪ್ರತಿ ವರ್ಷ 10 ಸಾವಿರ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಯಾಯಿ ಅವರು ರೈತ ವಿದ್ಯಾನಿಧಿ ಯೋಜನೆ ಜಾರಿಗೆ ತಂದು ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ನೀಡುತ್ತಿರುವುದು ಪ್ರಶಂಸನೀಯ ಎಂದರು.

ರೈತ ವಿದ್ಯಾನಿಧಿ ಯೋಜನೆಯಡಿ ರಾಜ್ಯದ ಒಟ್ಟು 10.5 ಲಕ್ಷ ವಿದ್ಯಾರ್ಥಿಗಳು ಫಲಾನುಭವಿಗಳಾಗಿದ್ದಾರೆ, ರೈತರಿಗೆ ನೀಡಬೇಕಾದ ಎಲ್ಲ ಕಾರ್ಯಕ್ರಮ ಸರ್ಕಾರ ನೀಡುತ್ತಿದೆ. ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಲಾಭ ತಂದುಕೊಡುವ ಕ್ರಮಗಳತ್ತ ಸರ್ಕಾರ ನಿರಂತರವಾಗಿ ಗಮನ ಹರಿಸುತ್ತಿದೆ ಎಂದು ಹೇಳಿದರು.

ರೈತರ ಮಕ್ಕಳು ಆತ್ಮವಿಶ್ವಾಸ ಬೆಳೆಸಿಕೊಳ್ಳಿ, ವಿಶೇಷ ಪ್ರತಿಭೆಯಿಂದ ಬೆಳೆಯಬೇಕು, ಕೀಳರಿಮೆ ಬೆಳೆಸಿಕೊಳ್ಳದೇ ಮುಂದುವರಿಯುವಂತೆ ಸಚಿವರು ಸಲಹೆ ನೀಡಿದರು. ಹಳ್ಳಿಯ ರೈತರ ಮಕ್ಕಳಿಗೆ ಆದರ್ಶ ಸರ್.ಎಂ. ವಿಶ್ವೇಶ್ವರಯ್ಯ. ಅವರು ಬಡತನದಲ್ಲಿ ಜನಿಸಿ, ದಾರಿ ದೀಪದ ಬೆಳಕಿನಲ್ಲಿ ಓದಿ, ವಿಶ್ವ ವಿಖ್ಯಾತರಾಗಿದ್ದಾರೆ. ಅವರು ಭಾರತ ರತ್ನ ಗಳಿಸಿ, ಮೈಸೂರು, ಮಂಡ್ಯ ಜಿಲ್ಲೆಗಳ ಅಭ್ಯುದಯಕ್ಕೆ ಕಾರಣರಾಗಿದ್ದಾರೆ ಅವರನ್ನು ಸ್ಪೂರ್ತಿಯಾಗಿ ಪಡೆದು ಮಕ್ಕಳು ಉನ್ನತ ವ್ಯಾಸಂಗ ಮಾಡಬೇಕು ಎಂದು ಸಚಿವರು ಹೇಳಿದರು.

ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ, ಉಪಾಧ್ಯಕ್ಷ ಮಂಜುನಾಥ್, ನಿರ್ದೇಶಕ ಶ್ರೀನಿವಾಸ್, ಕೃಷ್ಣಯ್ಯ, ಜಯಚಂದ್ರ ಗೌಡ, ಶ್ರೀನಿವಾಸ್, ಸುಧಾಕರ್, ಡಾ.ಎಂ. ಗಂಗಯ್ಯ, ವೆಂಕಟಸ್ವಾಮಿ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ