NEWSನಮ್ಮಜಿಲ್ಲೆನಮ್ಮರಾಜ್ಯ

ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಎಎಪಿ ಹೋರಾಟ: ಮುಖ್ಯಮಂತ್ರಿ ಚಂದ್ರು

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಸ್ಮಾರ್ಟ್‌ ಸಿಟಿ ಯೋಜನೆಯಡಿ ಆಗಿರುವ ಕಾಮಗಾರಿಗಳಲ್ಲಿ ಲೋಪ ಆಗಿದೆ. ಗುಣಮಟ್ಟದ ಕಾಮಗಾರಿಗಳಾಗಿಲ್ಲ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಈ ಎಲ್ಲಾ ವಿಚಾರಗಳನ್ನು ಹಳ್ಳಿ ಹಳ್ಳಿಗೆ ಹೋಗಿ ಜನರೊಟ್ಟಿಗೆ ಚರ್ಚಿಸುತ್ತೇವೆ. ಎಎಪಿ ಸಂಸ್ಥಾಪನಾ ದಿನದಂದು ಮಾಡಿರುವ ಪ್ರಮಾಣದಂತೆ, ಭ್ರಷ್ಟಾಚಾರವನ್ನು ಭೇದಿಸುತ್ತೇವೆ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ 70 ವರ್ಷಗಳಿಂದ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೂರು ಪಕ್ಷಗಳು ಮಾಡಿದ್ದು ಕೇವಲ ಲೂಟಿ. ನರೇಂದ್ರ ಮೋದಿಯವರ ಸ್ಮಾರ್ಟ್ ಸಿಟಿ ಯೋಜನೆಯ ಅನುಷ್ಠಾನ ಸರಿಯಾಗಿಲ್ಲ. 100 ಸ್ಮಾರ್ಟ್ ಸಿಟಿಗಳಲ್ಲಿ ಒಂದೇ ಒಂದು ಕಡೆ ಪೂರ್ಣಗೊಂಡಿಲ್ಲ. ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆ ಕೂಡ ಹಳ್ಳ ಹಿಡಿದಿದೆ ಎಂದು ದೂರಿದರು.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿನ ಭ್ರಷ್ಟಾಚಾರವನ್ನು ಖಂಡಿಸಿ, ಮುಂದಿನ 15 ರಿಂದ 20 ದಿನಗಳಲ್ಲಿ ಶ್ವೇತಪತ್ರ ಹೊರಡಿಸಬೇಕು. ಈ ಸಂಬಂಧ ಸಮಗ್ರ ತನಿಖೆಗೆ ಒತ್ತಾಯಿಸಿ ಆಮ್ ಆದ್ಮಿ ಪಕ್ಷ ರಾಜ್ಯದಾದ್ಯಂತ ಬೀದಿಗಿಳಿದು ಹೋರಾಟ ನಡೆಸಲಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಕೇಂದ್ರದಿಂದ ಬಿಡುಗಡೆಯಾಗಿರುವ ಹಣವೆಷ್ಟು, ರಾಜ್ಯದಿಂದ ಬಿಡುಗಡೆ ಆಗಿರುವ ಹಣ ಎಷ್ಟು ಎಂಬುದನ್ನು ತಿಳಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಗೆ ಮುಂಚೆ ಚಿಟಗೇರಿ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ನ್ಯೂನತೆಗಳನ್ನು ಪರಿಶೀಲಿಸಿ ರೋಗಿಗಳು ಹಾಗೂ ವೈದ್ಯರೊಂದಿಗೆ ಚರ್ಚಿಸಿದರು.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬಿಡುಗಡೆಯಾಗಿರುವ 1000 ಕೋಟಿ ರೂ. ಪೈಕಿ ಸುಮಾರು 33 ಕೋಟಿ ಅಂದರೆ ಶೇ 0.3 ರಷ್ಟು ಮಾತ್ರ ಬಳಸಲಾಗಿದೆ. ಈ ಪೈಕಿ ಶಿಕ್ಷಣ- 4 ಕೋಟಿ ರೂ., ಆರೋಗ್ಯ- 29 ಕೋಟಿ ರೂ. ನಿಗದಿಪಡಿಸಲಾಗಿದೆ. ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಪಟ್ಟ ಯೋಜನೆಗಳಿಗೆ ಕಡಿಮೆ ಹಣ ಮೀಸಲಿಟ್ಟಿದೆ. ಇದೇನಾ ಬಿಜೆಪಿ ಸರ್ಕಾರದ ನಿಯತ್ತು ಎಂದು ಪ್ರಶ್ನಿಸಿದರು.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಶೇ 40 ರಿಂದ 50 ರಷ್ಟು ಭ್ರಷ್ಟಾಚಾರ ನಡೆದಿದೆ. ರಸ್ತೆಗಳು, ಗ್ರೀನ್ ಕಾರಿಡಾರ್ ಯೋಜನೆಗಳು ಶಹರ ಪಟ್ಟಣಕ್ಕೆ ಒಳ್ಳೆಯ ಮೆರಗು ನೀಡುತ್ತಿವೆ. ಆದರೂ, ಕಳಪೆ ಕಾಮಗಾರಿ ಎದ್ದು ಕಾಣುತ್ತಿದೆ. ಇದನ್ನೆಲ್ಲಾ ನೋಡಿದರೆ 1000 ಕೋಟಿ ರೂ. ವೆಚ್ಚದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಅದನ್ನು ಬಯಲಿಗೆಳೆದು ಹುಬ್ಬಳ್ಳಿ-ಧಾರವಾಡವನ್ನು ನಿಜವಾಗಿಯೂ ಸ್ಮಾರ್ಟ್ ಸಿಟಿಯನ್ನಾಗಿ ಮಾಡಲು ಆಮ್ ಆದ್ಮಿ ಪಕ್ಷ ಕೆಲಸ ಮಾಡಲಿದೆ ಎಂದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಜನರ ಸಹಭಾಗಿತ್ವಕ್ಕೆ ವಾರ್ಡ್ ಸಮಿತಿ ರಚಿಸುವ ಕಾಯ್ದೆ ಇದ್ದರೂ, ಪಾಲಿಕೆ ಅಸ್ತಿತ್ವಕ್ಕೆ ಬಂದು 3 ವರ್ಷ ಕಳೆದರೂ ವಾರ್ಡ್ ಸಮಿತಿ ರಚಿಸಿ ಕಾರ್ಯರೂಪಕ್ಕೆ ತಂದಿಲ್ಲ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಥವಾ ಬೇರೆ ಯಾವುದೇ ಪಕ್ಷಗಳಿಗೆ ರಾಜಕೀಯ ಇಚ್ಛಾಶಕ್ತಿ ಇಲ್ಲ. ಚುನಾವಣೆ ಇದ್ದಾಗ ಮಾತ್ರ ಜನರು ನೆನಪಾಗುತ್ತಾರೆ. ಇದು ಖಂಡನೀಯ ಎಂದು ಹೇಳಿದರು.

ಇದಕ್ಕೂ ಮುನ್ನ ಚಿಟಗುಪ್ಪ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಅಲ್ಲಿನ ನ್ಯೂನತೆಗಳ ಬಗ್ಗೆ ವೈದ್ಯರೊಂದಿಗೂ ಚರ್ಚೆ ನಡೆಸಿದರು.

ಭವಾನಿ ರೇವಣ್ಣ ವಿರುದ್ಧ ಕಿಡಿ: ತಮ್ಮ ಕಾರಿಗೆ ಅಪಘಾತ ಮಾಡಿದ ವ್ಯಕ್ತಿಯೊಬ್ಬರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಭವಾನಿ ರೇವಣ್ಣ ಅವರ ನಡೆ ಅಮಾನವೀಯವಾಗಿದ್ದು, ಅವರು ಕ್ಷಮೆ ಕೇಳಬೇಕು. ತಮ್ಮ ಒಂದೂವರೆ ಕೋಟಿ ಬೆಲೆ ಬಾಳುವ ಕಾರಿನ ಮುಂದೆ ಮನುಷ್ಯರ ಜೀವಕ್ಕೆ ಬೆಲೆ ಇಲ್ಲದಂತೆ ಅವರು ಮಾತನಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ನಡೆದುಕೊಳ್ಳಬಾರುದು ಎಂದರು.

ಭವಾನಿ ಅವರನ್ನು ಸಮರ್ಥಿಸುವ ರೀತಿಯಲ್ಲಿ ದೇವೇಗೌಡರು ಮತ್ತು ರೇವಣ್ಣ ಅವರು ಮಾತನಾಡಿರುವುದು ಸರಿಯಲ್ಲ. ನೈತಿಕ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಕಾರ್ಯದರ್ಶಿ ಬಸವರಾಜ ಮುದಿಗೌಡರ್, ಅನಂತಕುಮಾರ್ ಬುಗುಡಿ, ಜಿಲ್ಲಾಧ್ಯಕ್ಷ ಪ್ರವೀಣ್ ನಡಕಟ್ಟಿನ, ಮಹಿಳಾ ಘಟಕದ ಅಧ್ಯಕ್ಷೆ ಪ್ರತಿಭಾ ದಿವಾಕರ ,ಜಿಲ್ಲಾ ಮಾಧ್ಯಮ ಉಸ್ತುವಾರಿ ಮಲ್ಲಿಕಾರ್ಜುನ ಹಿರೇಮಠ, ಬಸವರಾಜ ಗುತ್ತೇದಾರ, ವಿಕಾಸ್ ಸೊಪ್ಪಿನ್ ಸೇರಿದಂತೆ ಹಲವು ಮುಖಂಡರುಗಳು ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು